ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ ಆಹಾರ ಪದಾರ್ಥಗಳು

74

ಸ್ನೇಹಿತರೆ ನಮ್ಮ ಮೆದುಳು ಚೆನ್ನಾಗಿ ಕಾರ್ಯವನ್ನು ನಿರ್ವಹಿಸಬೇಕೆಂದರೆ ದೇಹಕ್ಕೆ ಆರೋಗ್ಯಕರವಾದ ಆಮ್ಲಜನಕ ಮತ್ತು ದೇಹದಲ್ಲಿ ರಕ್ತಸಂಚಾರ ಕ್ರಿಯೆ ಚೆನ್ನಾಗಿ ನಡೆಯಬೇಕು. ಈ ಕಾರ್ಯವು ಮನುಷ್ಯನು ಪ್ರತಿನಿತ್ಯವೂ ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದ ಮೆದುಳಿನ ಚಟುವಟಿಕೆಗಳು ಮತ್ತು ಜ್ಞಾಪಕ ಶಕ್ತಿಯನ್ನು ಹಿಗ್ಗಿಸಲು ಕೆಲವೊಂದು ಆಹಾರವನ್ನು ಪ್ರತಿನಿತ್ಯವೂ ಕಡ್ಡಾಯವಾಗಿ ಸೇವಿಸಬೇಕು. ಈ ಒಂದು ಲೇಖನವು ಮುಖ್ಯವಾಗಿ ಮಕ್ಕಳ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಈ ಆಹಾರದ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ನಮಗೆ ಎಲ್ಲರಿಗೂ ಗೊತ್ತಿರುವ ಹಾಗೆ ಮಕ್ಕಳಿಗೆ, ವಿಧ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ತುಂಬಾ ಒತ್ತಡ ಇರುತ್ತದೆ. ಅಂಥಹ ಸಮಯದಲ್ಲಿ ನೆನಪಿನ ಶಕ್ತಿಯನ್ನು ಹೆಚ್ಚಿಸಲು ಒಳ್ಳೆಯ ಆಹಾರವನ್ನು ಕೊಡಬೇಕು. ಹಾಗಾದರೆ ಈ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳು ಯಾವುವು ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ನೆನಪಿನ ಶಕ್ತಿಯನ್ನು ಹೆಚ್ಚಿಸುವುದರಲ್ಲಿ ಬಾದಾಮಿ

ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಬಾದಾಮಿಯನ್ನು ಪುಡಿ ಮಾಡಿ ಹಾಲಿನೊಂದಿಗೆ ಸೇವಿಸಬೇಕು. ಇಲ್ಲವಾದರೆ ರಾತ್ರಿ ಹೊತ್ತು ನೆನೆಸಿಟ್ಟು ಬೆಳಿಗ್ಗೆ ಸಿಪ್ಪೆಯನ್ನು ತೆಗೆದು ಸೇವಿಸಬೇಕು. ಇದರಲ್ಲಿ ಇರುವ ಆಂಟಿ ಆಕ್ಸಿಡೆಂಟ್ ಮತ್ತು ಒಮೆಗಾ ತ್ರೀ ಫ್ಯಾಟಿ ಆಸಿಡ್ ಗಳು ಮೆದುಳಿನ ಕಾರ್ಯಗಳನ್ನು ಚೆನ್ನಾಗಿ ಮಾಡುವಂತೆ ಉತ್ತೇಜಿಸುತ್ತದೆ. ಅಂದರೆ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಮತ್ತು ಒತ್ತಡವನ್ನು ಹೋಗಲಾಡಿಸುತ್ತದೆ. ಆದ್ದರಿಂದ ಪ್ರತಿನಿತ್ಯವೂ ಬಾದಾಮಿಯನ್ನು ಸೇವಿಸಬೇಕು. ಇದು ಗರ್ಭಿಣಿಯರಿಗೆ ಮತ್ತು ಚಿಕ್ಕ ಮಕ್ಕಳ ಬೆಳವಣಿಗೆ ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಈ ಬಾದಾಮಿ ತುಂಬಾ ಲಾಭದಾಯಕವಾಗಿದೆ. ಜ್ಞಾಪಕ ಶಕ್ತಿಯನ್ನು ಹಿಗ್ಗಿಸುವಲ್ಲಿ ಬೆಟ್ಟದ ನೆಲ್ಲಿಕಾಯಿ ಮುಖ್ಯ ಕಾರ್ಯವನ್ನು ನಿರ್ವಹಿಸುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿ ಇರುವ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮತ್ತು ಬೆಟ್ಟದ ನೆಲ್ಲಿಕಾಯಿ ಜ್ಯೂಸ್ ಮಾಡಿ ಕುಡಿಯಬಹುದು ಅಥವಾ ಹಸಿಯಾಗಿ ಹಾಗೇ

ತಿನ್ನಬಹುದು. ಇದು ದೇಹದಲ್ಲಿ ಇರುವ ಕೊಬ್ಬನ್ನು ಕರಗಿಸುತ್ತದೆ. ಮತ್ತು ಮೆದುಳಿನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಕಪ್ಪು ಜೀರಿಗೆ, ಈ ಕಪ್ಪು ಜೀರಿಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿನಿತ್ಯವೂ ಒಂದು ಚಮಚ ಕಪ್ಪುಜೀರಿಗೆ ಮತ್ತು ಜೇನತುಪ್ಪವನ್ನು ಸೇರಿಸಿ ತಿನ್ನಬೇಕು. ಇದರಿಂದ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ. ಜೊತೆಗೆ ಮೆದುಳಿಗೆ ಸಂಭಂದಿಸಿದ ಆರೋಗ್ಯವನ್ನು ವೃದ್ಧಿಸುತ್ತದೆ. ಕಪ್ಪು ಜೀರೀಗೆಯಲ್ಲಿ ಜ್ಞಾಪಕ ಶಕ್ತಿ ಹೆಚ್ಚಿಸುವ ಗುಣ ಜಾಸ್ತಿಯಾಗಿ ಇರುತ್ತದೆ. ವಯಸ್ಕರಲ್ಲಿ ಮರುವಿನ ಕಾಯಿಲೆ ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಆದ್ದರಿಂದ ಪ್ರತಿನಿತ್ಯವೂ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಆಹಾರವನ್ನು ಸೇವಿಸಬೇಕು. ಇದರಿಂದ ಮರುವಿನ ಸಮಸ್ಯೆ ದೂರವಾಗುತ್ತದೆ. ಮೆದುಳಿಗೆ ಸಂಭಂದಿಸಿದ ಕಾಯಿಲೆಗಳು ವೃದ್ಧಾಪ್ಯದಲ್ಲಿ ಮಾತ್ರ ಕಾಣಿಕೊಳ್ಳುವುದಲ್ಲದೆ ಕೆಲವರಿಗೆ ಯೌವನದಲ್ಲಿ ಕಾಣಿಸಿಕೊಳ್ಳುತ್ತದೆ. ಇದ್ದಕ್ಕೆ ಮುಖ್ಯವಾಗಿ ನಾವು ಸೇವಿಸುವ ಆಹಾರ ಮತ್ತು ಆಧುನಿಕ ಜೀವನ ಶೈಲಿಯ ಮೇಲೆ ಅವಲಂಬಿತವಾಗಿರುತ್ತದೆ. ಮರುವಿನ ಸಮಸ್ಯೆಯಿಂದ ಬರಬಾರದು ಎಂದರೆ ಪ್ರತಿನಿತ್ಯ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಮತ್ತು ಆರೋಗ್ಯಕರ ಜೀವನವನ್ನು ನಿಮ್ಮದಾಗಿಸಿಕೊಳ್ಳಿ.

LEAVE A REPLY

Please enter your comment!
Please enter your name here