ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಕೇವಲ 15 ದಿನಗಳಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಸಿಗುತ್ತೆ
ನಮಸ್ಕಾರ ಪ್ರಿಯ ಸ್ನೇಹಿತರೇ, ಕೋವಿಡ್ ಸಮಸ್ಯೆ ಆಗಿರಬಹುದು ಅಥವಾ ಚುನಾವಣೆ ನಡೆಯುತ್ತಿರುವುದರಿಂದ ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನ ಸಲ್ಲಿಸಿದ್ದರು ಕೂಡ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವವಾದ ನಿರ್ಧಾರವನ್ನ ತೆಗೆದುಕೊಂಡಿದೆ.
ಹೊಸ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳುವುದಕ್ಕೆ ದಿನಾಂಕವನ್ನು ಕೂಡ ನಿಗದಿಪಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದಂತಹ ಕೆ ಹೆಚ್ ಮುನಿಯಪ್ಪನವರು ಹೊಸ ಪಡಿತರ ಚೀಟಿಗೆ ಯಾವ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವವಾದ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಟ್ವಿಟರ್ ನಲ್ಲಿ ಅವರು ಈ ವಿಷಯವನ್ನು ತಿಳಿಸಿದ್ದಾರೆ. ಅರ್ಜಿದಾರರ ಅರ್ಜಿಗಳನ್ನ ಪರಿಶೀಲನೆ ಮಾಡಿ. 15 ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗಳನ್ನು ಸಿಗುವಂತೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಅರ್ಜಿಯನ್ನ ಸಲ್ಲಿಸಿರುವವರು ಮೂರು ಲಕ್ಷಕ್ಕಿಂತ ಹೆಚ್ಚು ಜನರು ಪಡಿತರ ಚೀಟಿಯ ಅರ್ಜಿಯನ್ನ ಸಲ್ಲಿಕೆ ಆಗಿರುವುದನ್ನು ಪರಿಶೀಲನೆ ಮಾಡಿ
ಹೊಸ ರೇಷನ್ ಕಾರ್ಡ್ ಗಳನ್ನ ಅವರಿಗೆ ಸಿಗುವಂತೆ ಮಾಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಡಿತರ ಚೀಟಿಯನ್ನು ಹೊಂದಿರುವವರಿಗೆ ಹಣದ ಬದಲಾಗಿ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರ್ಧಾರವನ್ನ ತೆಗೆದುಕೊಳ್ಳುತ್ತಿದ್ದಾರೆ ಎಂದು ಕೆ ಹೆಚ್ ಮುನಿಯಪ್ಪನವರು ತಿಳಿಸಿದ್ದಾರೆ. ಹಳೆಯ ಕಾರ್ಡ್ ಗಳನ್ನ ಹೊಂದಿರುವವರಿಗೆ ಸಂಕಷ್ಟಗಳು ಎದುರಾಗುವ ಸಾಧ್ಯತೆ ಇದೆ.
ಯಾರು ರೇಷನ್ಗಳನ್ನ ಪಡೆದುಕೊಳ್ಳುತ್ತಿಲ್ಲ ಅಂತವರ ರೇಷನ್ ಕಾರ್ಡ್ ಗಳನ್ನು ಸಂಪೂರ್ಣವಾಗಿ ರದ್ದು ಮಾಡಬೇಕು ಎನ್ನುವ ತೀರ್ಮಾನವನ್ನ ತೆಗೆದುಕೊಂಡಿದ್ದಾರೆ.
ರೇಷನ್ ಕಾರ್ಡ್ ಗಳನ್ನು ಮಾಡಿಸಿಕೊಳ್ಳಬೇಕು ಎಂದು ನೀವೇನಾದರೂ ಅರ್ಜಿಯನ್ನ ಸಲ್ಲಿಸಿದ್ದರೆ ಅವುಗಳನ್ನು ಆನ್ಲೈನ್ ಗಳ ಮೂಲಕ ಹೇಗೆ ಇದೆ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ತಿಳಿದುಕೊಳ್ಳಬಹುದು.
ಆಹಾರ ಇಲಾಖೆಯ ಅಧಿಕೃತವಾದ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಮಾಹಿತಿಯನ್ನು ಪಡೆಯಬಹುದಾಗಿದೆ. ನೀವೇನಾದರೂ ರೇಷನ್ ಕಾರ್ಡ್ ಗೆ ಅರ್ಜಿಯನ್ನ ಸಲ್ಲಿಸಿದ್ದರೆ ಮುಂದಿನ ಹದಿನೈದು ದಿನದ ಒಳಗಾಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಸಿಗುವಂತೆ ಸರ್ಕಾರ ತೀರ್ಮಾನ ಕೈಗೊಂಡಿದೆ ಅದೇ ರೀತಿಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ನೀವು ಈ ರೀತಿಯ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿದರೆ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು.
I no have Ration card BPL
Retion card applying