ಚಿಕ್ಕಮಗಳೂರು ಜಿಲ್ಲಾ ಸಹಕಾರ ಕ್ಷೇತ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024
ನಮಸ್ಕಾರ ಪ್ರಿಯ ಸ್ನೇಹಿತರೇ, ಚಿಕ್ಕಮಗಳೂರು ಜಿಲ್ಲಾ ಸಹಕಾರ ಕ್ಷೇತ್ರ ಬ್ಯಾಂಕ್ ನಿಯಮದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ.
ಆನ್ಲೈನ್ ಗಳ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದು ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿಯನ್ನ ಸಲ್ಲಿಸಿ.
ಚಿಕ್ಕಮಗಳೂರು ಜಿಲ್ಲೆಯ ಡಿಸಿಸಿ ಬ್ಯಾಂಕ್ ನಲ್ಲಿ ಒಟ್ಟು 85 ಹುದ್ದೆಗಳು ಖಾಲಿ ಇವೆ. ಸರ್ಕಾರದ ಆದೇಶದ ಮೂಲಕ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಅಧಿಕೃತವಾದ ವೆಬ್ಸೈಟ್ www. chikkamagalurudccbank. com ಈ ವೆಬ್ಸೈಟ್ಗಳ ಮೂಲಕ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯಾವೆಲ್ಲಾ ಹುದ್ದೆಗಳು ಖಾಲಿ ಇದೆ ಎಂದರೆ ಸಹಾಯಕ ವ್ಯವಸ್ಥಾಪಕರು 4 ಹುದ್ದೆ, ಈ ಹುದ್ದೆಗಳಿಗೆ ವೇತನ ಶ್ರೇಣಿ 36,000 ದಿಂದ 67 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಕಡ್ಡಾಯವಾಗಿ ಬರುವಂತಹ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವವರಿಗೆ ಮೊದಲ ಆದ್ಯತೆ.
ಪ್ರಥಮ ದರ್ಜೆ ಸಹಾಯಕರು ಒಟ್ಟು 18 ಹುದ್ದೆ, ಈ ಹುದ್ದೆಗಳಿಗೆ 27 ಸಾವಿರದಿಂದ 52 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು,
ಕಂಪ್ಯೂಟರ್ ಅಪ್ಲಿಕೇಶನ್ ಅಥವಾ ಜ್ಞಾನ ಕಡ್ಡಾಯವಾಗಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನು ಸಹ ಓದಿ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವಂತಹ ಹುದ್ದೆ
CRPF ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ನೇಮಕಾತಿ
ಗ್ರೂಪ್ ಸಿ ಹುದ್ದೆಗಳಲ್ಲಿ ಬಿಲ್ ಕಲೆಕ್ಟರ್ ನಲ್ಲಿ ಖಾಲಿ ಇರುವ ಹುದ್ದೆ
ಕಿರಿಯಾ ಸಹಾಯಕರು ಒಟ್ಟು 53 ಹುದ್ದೆಗಳು ಖಾಲಿ ಇವೆ, 21 ಸಾವಿರದಿಂದ 42 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಪದವಿಯ ಜೊತೆಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿರಬೇಕು.
ಸಹಾಯಕರು ಮತ್ತು ಅಟೆಂಡರ್ ಹುದ್ದೆಗಳು ಒಟ್ಟು 40 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ 18000 ದಿಂದ 32 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ ಎಸ್ ಎಸ್ ಎಲ್ ಸಿ ಯನ್ನು ಪೂರ್ಣಗೊಳಿಸಿರುವವರು ಕನ್ನಡ ಭಾಷೆ ಕಡ್ಡಾಯವಾಗಿ ಓದಲು ಮತ್ತು ಬರೆಯಲು ಮಾತನಾಡಲು ಬರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಕನ್ನಡ ಮಾಧ್ಯಮ, ಗ್ರಾಮಿಣ ಮಾಧ್ಯಮ, ಕಂಪ್ಯೂಟರ್ ಜ್ಞಾನ ಹೊಂದಿರುವ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
18 ವರ್ಷದಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 29 ಅಕ್ಟೋಬರ್ 2024 ಪ್ರಾರಂಭವಾದ ದಿನಾಂಕವಾಗಿದೆ. 27 ನವೆಂಬರ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.