ಇಂಡಿಯನ್ ಹೈವೇ ಮ್ಯಾನೇಜ್ಮೆಂಟ್ ನಲ್ಲಿ ಉದ್ಯೋಗಾವಕಾಶ.
ನಮಸ್ಕಾರ ಪ್ರಿಯ ಸ್ನೇಹಿತರೇ, ಪದವಿ ಶಿಕ್ಷಣ ಮುಗಿಸಿ ಉದ್ಯೋಗವನ್ನು ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಎಂದೇ ಹೇಳಬಹುದಾಗಿದೆ.
ಇಂಡಿಯನ್ ಹೈವೇ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಒಟ್ಟು 31 ಹುದ್ದೆಗಳು ಖಾಲಿ ಇವೆ ಇಂಜಿನಿಯರ್ ಮತ್ತು ಆಫೀಸರ್ ಹುದ್ದೆಗಳು ಖಾಲಿ ಇವೆ. ಸಿ ಏ ಓದಿರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು, ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆಗಸ್ಟ್ ಹದಿನಾರನೇ ತಾರೀಕು ಕೊನೆಯ ದಿನಾಂಕವಾಗಿದೆ.
ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಿ. ಯಾವ ಯಾವ ಹುದ್ದೆಗಳು ಇದೆ ಎಂದರೆ ಇಂಜಿನಿಯರ್ 30 ಹುದ್ದೆ ಮತ್ತು ಆಫೀಸರ್ ಒಂದು ಹುದ್ದೆ ಖಾಲಿ ಇದೆ.
ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಐಟಿ, ಸಿಎ, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಷನ್, ಡಾಟಾ ಸೈನ್ಸ್ ಮತ್ತು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು. ಆಫೀಸರ್ ಹುದ್ದೆಗಳಿಗೆ ಸಿಎ ಅಥವಾ ಸಿಎಂಎ ಪಡೆದಿರುವಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ 21 ವರ್ಷದಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ ಈ ಹುದ್ದೆಗಳಿಗೆ ಯಾವುದೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಕೇವಲ ಸಂದರ್ಶನವನ್ನ ಮಾಡಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ.
ಇದನ್ನು ಸಹ ಓದಿ:
ಮೋದಿ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್
ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ
ಸಾಲ ಸಿಗುವಂತಹ ಒಂದು ಬೆಸ್ಟ್ ಅಪ್ಲಿಕೇಶನ್
IDFC FIRST ಬ್ಯಾಂಕ್ ನಿಂದ ಎರಡು ಲಕ್ಷ ರೂಪಾಯಿ ಸ್ಕಾಲರ್ಶಿಪ್
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ, ಆಯ್ಕೆ ಆದರೆ 40,000 ದಿಂದ ಒಂದು ಲಕ್ಷದವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ. ಉದ್ಯೋಗ ಮಾಡುವ ಸ್ಥಳ ಭಾರತದ ಪ್ರತಿಯೊಂದು ಕಡೆಯಲ್ಲೂ ಕೂಡ ನೀವು ಕಾರ್ಯವನ್ನು ನಿರ್ವಹಿಸಬಹುದಾಗಿದೆ. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಸಂಪೂರ್ಣ ಮಾಹಿತಿಯನ್ನ ತಿಳಿಯಿರಿ.
ಆ ವೆಬ್ ಸೈಟ್ ಯಾವುದು ಎಂದರೆ https:// recruitment. ihmcl. co. in ಈ ವೆಬ್ ಸೈಟ್ಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳ ಮೂಲಕ ನೀವು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪುರುಷರು ಮತ್ತು ಮಹಿಳೆಯರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಧಾರ ಕಾರ್ಡ್ ಮತ್ತು ನಿಮ್ಮ ಶೈಕ್ಷಣಿಕ ಪ್ರಮಾಣ ಪತ್ರ, ಮೊಬೈಲ್ ನಂಬರ್ ಹೀಗೆ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಈ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.