ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಒಟ್ಟು 37 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
18 ವರ್ಷದಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಲಿಕ್ಕೆ ಕೂಡ ನೀಡಲಾಗುತ್ತದೆ. ಸಾಮಾನ್ಯ ವರ್ಗದವರಿಗೆ 35 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ 40 ವರ್ಷ, ಪ್ರವರ್ಗ 2a 2b 3a 3b ಅವರಿಗೆ 38 ವರ್ಷ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 27 ಸಾವಿರದಿಂದ ಒಂದು ಲಕ್ಷದ ಮೂವತ್ತ ನಾಲ್ಕು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಮೂಲಕ ನೀವು ಆಫ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ, ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದವರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು, ವಿಳಾಸ ಕಾರ್ಯದರ್ಶಿ, ಕರ್ನಾಟಕ ವಿಧಾನಸೌಧ, ಸಚಿವಾಲಯ ಮೊದಲನೇ ಮಹಡಿ ವಿಧಾನಸೌಧ, ಬೆಂಗಳೂರು 560001 ಈ ವಿಳಾಸಕ್ಕೆ ನೀವು ಅರ್ಜಿಯನ್ನು ಸಲ್ಲಿಸಬೇಕು.
ಅನೇಕ ಹುದ್ದೆಗಳು ಖಾಲಿ ಇವೆ ವರದಿಗಾರರು, ಕಂಪ್ಯೂಟರ್ ಜೂನಿಯರ್, ಪ್ರೋಗ್ರಾಮ್ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಕಿರಿಯ ಸಹಾಯಕರು, ಕಿರಿಯ ಗ್ರಂಥಾಲಯ ಸಹಾಯಕರು ಈ ರೀತಿಯಾಗಿ ಅನೇಕ ಹುದ್ದೆಗಳು ಖಾಲಿ ಇವೆ.
ಒಟ್ಟು 37 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಒಟ್ಟು 13 ಹುದ್ದೆಗಳು. ಉದ್ಯೋಗ ಮಾಡುವ ಸ್ಥಳ ಬೆಂಗಳೂರು, ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಸ್ನಾತಕೋತ್ತರ ಪದವಿ , ಲೈಬ್ರರಿ ಸೈನ್ಸ್ ಪದವಿ,
ಇದನ್ನು ಸಹ ಓದಿ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವಂತಹ ಹುದ್ದೆ
CRPF ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ನೇಮಕಾತಿ
ಗ್ರೂಪ್ ಸಿ ಹುದ್ದೆಗಳಲ್ಲಿ ಬಿಲ್ ಕಲೆಕ್ಟರ್ ನಲ್ಲಿ ಖಾಲಿ ಇರುವ ಹುದ್ದೆ
ಈ ವಿದ್ಯಾರ್ಹತೆ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅನೇಕ ಹುದ್ದೆಗಳು ಖಾಲಿ ಇವೆ ಅದರಲ್ಲಿ ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗೆ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
25 ನವೆಂಬರ್ ಕೊನೆಯ ದಿನಾಂಕವಾಗಿದೆ, ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೆ ಎಲ್ ಎ ಯಲ್ಲಿ ಇದು ನೇಮಕಾತಿಯ ಹೊಸ ಅಧಿಸೂಚನೆಯಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ 7ನೇ ತರಗತಿಯಿಂದ 10ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದು ಸರ್ಕಾರಿ ಉದ್ಯೋಗಗಳು ಖಾಯಂ ಆದಂತಹ ಉದ್ಯೋಗವಾಗಿದೆ. ಆದ್ದರಿಂದ ಪುರುಷರಾಗಿರಬಹುದು, ಮಹಿಳೆಯರಾಗಿರಬಹುದು ಇಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.