ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

76

ನಮಸ್ಕಾರ ಪ್ರಿಯ ಸ್ನೇಹಿತರೇ, ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದಲ್ಲಿ ಖಾಲಿ ಇರವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಇದು ಖಾಯಂ ಆದಂತ ಉದ್ಯೋಗ ಮತ್ತು ಸರ್ಕಾರಿ ಉದ್ಯೋಗಗಳಾಗಿವೆ ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಕಿರಿಯ ಸಹಾಯಕರು ಮತ್ತು ಮಾರಾಟ ಗುಮಾಸ್ತರು

ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ನಿಮಗೆ 21 ಸಾವಿರದಿಂದ 42 ಸಾವಿರದವರೆಗೆ ವೇತನವನ್ನು ನಿಗದಿಪಡಿಸಲಾಗಿದೆ ಹಾಗೆಯೇ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಕನ್ನಡ ಭಾಷೆ ಕಡ್ಡಾಯವಾಗಿ ಹೊಂದಿರಲೇಬೇಕು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

18 ವರ್ಷ ತುಂಬಿದಂತಹ ವ್ಯಕ್ತಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯಸ್ಸಿನ ಸಡಿಲಿಕೆ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನೀಡಲಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿ ಏನಾದರೂ ಆಯ್ಕೆಯಾದರೆ ಬೆಂಗಳೂರಿನ ಸುತ್ತಮುತ್ತಲಿನಲ್ಲಿ ಕಾರ್ಯವನ್ನು ನಿರ್ವಹಿಸಬಹುದಾಗಿದೆ. ಒಟ್ಟು ಐದು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಲೇಬೇಕು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಕೇಂದ್ರ ಕಚೇರಿಗೆ ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿ ಸಲ್ಲಿಸಬೇಕು. ರೂ.1000 ನೀವು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅಗತ್ಯ ದಾಖಲೆಗಳು ಯಾವುದು ಎಂದರೆ ಆಧಾರ್ ಕಾರ್ಡ್,

ಶೈಕ್ಷಣಿಕ ಪ್ರಮಾಣ ಪತ್ರ ಹೀಗೆ ಬೇರೆ ಬೇರೆ ರೀತಿಯ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ನೀವು ಸದಸ್ಯ ಕಾರ್ಯದರ್ಶಿ ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಕ ಅಧಿಕಾರಿ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘ ಬಸ್ ನಿಲ್ದಾಣದ ಪಕ್ಕ ಸರ್ಜಾಪುರ ಆನೇಕಲ್ ತಾಲೂಕು ಬೆಂಗಳೂರು ನಗರ ಜಿಲ್ಲೆ, ಈ ವಿಳಾಸಕ್ಕೆ ನೀವು ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬೇಕು 28 ಡಿಸೆಂಬರ್ ಸಂಜೆ 5:00 ಒಳಗಾಗಿ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

LEAVE A REPLY

Please enter your comment!
Please enter your name here