ಗ್ರಾಮ ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಖಾಲಿ ಇರುವ ಹುದ್ದೆಗಳ ನೇಮಕಾತಿ

68

ನಮಸ್ಕಾರ ಪ್ರಿಯ ಸ್ನೇಹಿತರೇ, 5000 ಅಧಿಕ ಉದ್ಯೋಗಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ಕೂಡ ಡಾಟಾ ಎಂಟ್ರಿ ಆಪರೇಟರ್ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಬೆಂಗಳೂರು ಇದರಿಂದ ಹೊರಡಿಸಿರುವ ನಿಯಮವಾಗಿದೆ.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕ ಮಾಡಿಕೊಂಡ ನಂತರ ಕನಿಷ್ಠ ನಿಮಗೆ 16000 ದಿಂದ ಹೆಚ್ಚುವರಿ ವೇತನ ಆಗುತ್ತಾ ಹೋಗುತ್ತದೆ ಪ್ರತಿ ತಿಂಗಳು ಕೂಡ ನಿಮಗೆ ಇದೇ ವೇತನವನ್ನು ನೀಡಲಾಗುತ್ತದೆ ಬಾಪೂಜಿ ಸೇವ ಕೇಂದ್ರದಲ್ಲಿ ಸಂಗ್ರಹವಾಗುವ ಹಣದಿಂದ ನಿಮಗೆ ವೇತನವನ್ನು ನೀಡಲಾಗುತ್ತದೆ.

ಪಿಯುಸಿ ಮತ್ತು ಪದವಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಕಂಪ್ಯೂಟರ್ ಜ್ಞಾನವನ್ನು ಕೂಡ ಹೊಂದಿರಲೇಬೇಕು. 18 ರಿಂದ 25 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿಮ್ಮ ವಿದ್ಯಾರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ನಿಮಗೆ ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಗ್ರಾಮ ಪಂಚಾಯಿತಿಯ ಒಪ್ಪಿಗೆಯನ್ನ ಪಡೆದುಕೊಂಡು ಕೂಡ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಿಮ್ಮ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನಿಮ್ಮನ್ನ ನೇಮಕ ಮಾಡಿಕೊಳ್ಳಲಾಗುತ್ತದೆ.

ಪಂಚಾಯತ್ ರಾಜ್ ಆಯುಕ್ತಾಲಯದಿಂದ ಅಧಿಕೃತವಾಗಿ ಅಧಿಸೂಚನೆ ಬಿಡುಗಡೆಯಾಗಲಿದ್ದು ಯಾವಾಗ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿಯನ್ನು ಕೂಡ ತಿಳಿಸುತ್ತಾರೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ನೀವು ಆನ್ಲೈನ್ ಗಳ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಬೆಂಗಳೂರಿನಿಂದ ಈ ಹುದ್ದೆಗೆ ನೇಮಕಾತಿಯನ್ನು ಹೊರಡಿಸಲಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here